ಮುಂಬೈ:- ಇಲ್ಲಿನ ಲಾಲ್ಜಿಪಾಡಾದ ಕಾಂದಿವಲಿಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ದೇವಸ್ಥಾನದಿಂದ ಪೂಜೆ ಮುಗಿಸಿ ಹಿಂದಿರುಗುತ್ತಿದ್ದ ಹಿಂದೂ ಪುರೋಹಿತರ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಜನನಿಬಿಡ ರಸ್ತೆಯಲ್ಲಿ ಚಾಕು ಮತ್ತು ಕೋಲುಗಳಿಂದ ಶಸ್ತ್ರಸಜ್ಜಿತವಾದ ಗುಂಪೊಂದು ಇಬ್ಬರು ಹಿಂದೂ ಪುರೋಹಿತರ ಮೇಲೆ ಹಲ್ಲೆ ನಡೆಸಿದೆ.
ಅರ್ಚಕರು ದೇವಸ್ಥಾನದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪೊಂದು ಚಾಕುವಿನಿಂದ ಇರಿದಿದೆ. ಗುಂಪು ಗುಂಪುಗಳಾಗಿ ಪುರೋಹಿತರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ. ಕಿತ್ತಳೆ ಬಣ್ಣದ ಬಟ್ಟೆ ಧರಿಸಿದ್ದ ಒಬ್ಬ ಪುರೋಹಿತ ರಸ್ತೆಯಲ್ಲಿ ಬಿದ್ದ ಸ್ಕೂಟರ್‌ನ ಹತ್ತಿರ ನಿಂತಿರುವುದು ಕಂಡುಬಂದರೆ, ಮತ್ತೊಬ್ಬ ಬಿಳಿಬಣ್ಣದ ಬಟ್ಟೆ ಧರಿಸಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹಲ್ಲೆ ನಡೆಸಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಒಬ್ಬ ವ್ಯಕ್ತಿಯು ಚಾಕುವನ್ನು ಹಿಡಿದಿರುವುದು ಕಂಡುಬರುತ್ತದೆ, ಇತರರು ತಮ್ಮ ಕೈಯಲ್ಲಿ ಕೋಲುಗಳನ್ನು ಹಿಡಿದಿರುವುದು ಕಂಡುಬರುತ್ತದೆ. ಆದರೆ, ದಾಳಿಯ ಹಿಂದಿನ ಕಾರಣ ತಿಳಿದುಬಂದಿಲ್ಲ.
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ದಾಳಿಯಲ್ಲಿ ಕನಿಷ್ಠ 5 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಅರ್ಚಕರ ಮೇಲಿನ ಅಮಾನುಷ ಹಲ್ಲೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.