Illegal Electricity Connection: ಗೃಹ ಜ್ಯೋತಿ ಯೋಜನೆಯ ವಿದ್ಯುತ್ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್ ನಾಯಕಿ!

Share to all

ಚಿಕ್ಕಮಗಳೂರು: ಸರ್ಕಾರದಿಂದ ರಾಜ್ಯದ ಎಲ್ಲ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಮನೆಗೆ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಸರ್ಕಾರದಿಂದ ಉಚಿತವಾಗಿ ಕೊಡುತ್ತಿರುವ ವಿದ್ಯುತ್ ಯೋಜನೆಯನ್ನು ಸ್ವತಃ ಕಾಂಗ್ರೆಸ್ ನಾಯಕಿಯೇ ದುರುಪಯೋಗ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಹೌದು ಈ ಕಾಂಗ್ರೆಸ್ ನಾಯಕಿ ಕೇವಲ ಕಾರ್ಯಕರ್ತೆಯಲ್ಲಿ, ಕಾಂಗ್ರೆಸ್ ಪಕ್ಷದ ಅಡಿಯಲ್ಲಿ ಗ್ರಾಮ ಪಂಚಾಯಿತಿಗೆ ಆಯ್ಕೆಯಾದ ಜನಪ್ರತಿನಿಧಿ ಆಗಿದ್ದಾಳೆ. ಸರ್ಕಾರದಿಂದ ಉಚಿತವಾಗಿ ವಿದ್ಯುತ್ ಕೊಟ್ಟರೂ ಕರೆಂಟ್ ಕದ್ದ ಮಹಿಳೆ ಚಿಕ್ಕಮಗಳೂರು ಜಿಲ್ಲೆ ನಾರಾಯಣಪುರ ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಆಶಾ ನಾರಾಯಣ್.

ಇವರು ದೇವದಾನ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದುಕೊಂಡು ತಾಲೂಕಿನಲ್ಲಿ ಹೆಚ್ಚು ಪ್ರಭಾವವನ್ನೂ ಹೊಂದಿದ್ದಾರೆ. ಆದರೆ, ಈಗ ಅಕ್ರಮವಾಗಿ ಕರೆಂಟ್ ಕದ್ದು ಸಿಕ್ಕಿಬಿದ್ದಿದ್ದಾರೆ. ತಾವು ವಾಸವಾಗಿರುವ ಕಡಬಗೆರೆಯಲ್ಲಿ ಮೂರು ಮನೆಗಳಿಗೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಡಬಗೆರೆ ಮನೆ ಮೇಲೆ ಮೆಸ್ಕಾಂ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಕಳ್ಳತನ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ವೇಳೆ ಅಕ್ರಮ ವಿದ್ಯುತ್ ಕಳ್ಳತನ ಮಾಡಿರುವುದು ಬೆಳಕಿಗೆ ಬರುತ್ತಿದ್ದಂತೆ 1 ಲಕ್ಷ ರೂ. ದಂಡವನ್ನು ವಿಧಿಸಿದ್ದಾರೆ.


Share to all

You May Also Like

More From Author