ಮಹಾರಾಷ್ಟ್ರ:- ಆತ ಮಕ್ಕಳನ್ನು ತನ್ನ ಮಕ್ಕಳಂತೆ ಪೋಷಿಸಿ ಬುದ್ದಿ ಹೇಳುಕೊಡುವಾತ. ಮಕ್ಕಳು ತಪ್ಪು ಮಾಡಿದ್ರೆ ಶಿಕ್ಷಿಸಿ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಹೇಳಬೇಕು. ಆದರೆ ಶಿಕ್ಷಕನೆ ನೀಚ ಕೆಲಸ ಮಾಡಿದ್ರೆ ಮಕ್ಕಳ ಪಾಡೇನು!? ಶಿಕ್ಷಕ ಅಂದ್ರೆ ಶಿಕ್ಷಿಸು, ಕ್ಷಮಿಸು, ಕಲಿಸು,, ಎಂಬ ಪದದ ಅರ್ಥವನ್ನೇ ಈ ನೀಚ ಮರೆತು ಹೆಣ್ಣು ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ.ಹೌದು,ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಬೆತ್ತಲೆ ಚಿತ್ರ ತೋರಿಸಿ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಶಿಕ್ಷಕನನ್ನು ಅಂದರ್ ಮಾಡಲಾಗಿದೆ.
ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.
8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಒಬ್ಬಾಕೆ ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು. ಅಧಿಕಾರಿಗಳು ಶಾಲೆಗೆ ಹೋಗಿ ತನಿಖೆಯನ್ನು ನಡೆಸಿ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ವಿವರಗಳ ಪ್ರಕಾರ, ಶಿಕ್ಷಕ ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ. ವಿಡಿಯೊ ತೋರಿಸುತ್ತಾ ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಆರು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮಂಗಳವಾರ ಬೆಳಿಗ್ಗೆ ಶಾಲೆಗೆ ಭೇಟಿ ನೀಡಿ ಕೆಲವು ಬಾಲಕಿಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಆಶಾ ಮಿರ್ಗೆ ಒತ್ತಾಯಿಸಿದ್ದಾರೆ.