ಆತಂಕಕಾರಿ ಸುದ್ದಿ: ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆ!

Share to all

ಮೈಸೂರು:– ಆತಂಕಕಾರಿ ಸುದ್ದಿ ಒಂದು ಹೊರ ಬಿದ್ದಿದ್ದು, ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆಯಾಗಿದೆ. ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ವಸ್ತುಗಳು ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗುತ್ತಿದ್ದರು ಎಂದು ಸಂಶಯ ವ್ಯಕ್ತವಾಗಿದೆ. ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಚಿರತೆ, ಹುಲಿ ದಾಳಿಯಿಂದ ಅನೇಕರು ಗಾಯಗೊಂಡಿದ್ದರೆ, ಕೆಲವರ ಪ್ರಾಣ ಪಕ್ಷಿ ಹಾರಿಹೋಗಿದೆ. ಇನ್ನು ಕೆಲವರು ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.


Share to all

You May Also Like

More From Author