ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ತಮ್ಮ ಹಳ್ಳಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಇವರಿಗೆ ಅದೇ ಗ್ರಾಮದ ಇನ್ನಷ್ಟು ವೃದ್ಧೆಯರು ಸಹಕಾರ ನೀಡಿದ್ದಾರೆ. ಹೌದು ಕಳೆದ ವರ್ಷ ಆಗಸ್ಟ್‌ನಲ್ಲಿ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದೆ. ಈಗಾಗಲೇ 10 ತಿಂಗಳಿಂದ ಮಾಸಿಕ 2000 ರೂಪಾಯಿ ಹಣ ಫಲಾನುಭವಿಗಳಿಗೆ ಸಿಗುತ್ತಿದೆ.
ಸಿದ್ದರಾಮಯ್ಯನವರು ಪ್ರತಿ ತಿಂಗಳು ನಮಗೆಲ್ಲಾ 2000 ಹಣ ನೀಡ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ, ಅಜ್ಜಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಹರಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.
ಗೃಹಲಕ್ಷ್ಮೀ ಯೋಜನೆಯಿಂದ ನಮ್ಮಂಥಹ ಮುದುಕಿಯರ ಕೈಗೆ ಹಣ ಬರುತ್ತಿದೆ. ನಮಗೆ ದೊಡ್ಡ ಸಹಕಾರ ಆಗುತ್ತಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ನಿಲ್ಲಿಸಬಾರದು ” ಎಂದು ಊಟ ಹಾಕಿಸಿದ ಅಜ್ಜಿಯರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಪ್ರತಿ ತಿಂಗಳು ನಮಗೆಲ್ಲಾ 2,000 ರೂಪಾಯಿ ನೀಡ್ತಿದ್ದಾರೆ.
ಈಗಾಗಲೇ 10 ತಿಂಗಳ ಹಣ ಬಂದಿದೆ. ಸಿದ್ದರಾಮಯ್ಯ ರಾಜ್ಯಕ್ಕೆ ಒಳ್ಳೆಯದು ಮಾಡುತ್ತಿದ್ದಾರೆ. ಜಗತ್ತಿಗೆ ಅವರು ಅನ್ನ ಹಾಕುತ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ, ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿದ್ದೇನೆ. 5 ಮುತ್ತೈದೆಯರಿಗೆ ಉಡಿ ತುಂಬಿಸಿ ಊರಿಗೆ ಹೋಳಿಗೆ ಊಟ ಹಾಕಿಸುತ್ತಿದ್ದೇವೆ ” ಎನ್ನುತ್ತಾರೆ ಅಜ್ಜಿ ಅಕ್ಕಾತಾಯಿ ಲಂಗೋಟಿ ಹೇಳಿದ್ದಾರೆ.