ಪ್ರೀತಿಗೆ ಪೋಷಕರ ವಿರೋಧ: ಒಂದೇ ಫ್ಯಾನಿನಲ್ಲಿ ನೇತಾಡುತಿತ್ತು ಇಬ್ಬರು ಯುವ ಪ್ರೇಮಿಗಳ ಶವ!

Share to all

ಆನೇಕಲ್:- ಪ್ರೀತಿಗೆ ಪೋಷಕರ ವಿರೋಧ ಹಿನ್ನೆಲೆ, ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಜರುಗಿದೆ. ಪ್ರಿಯಕರನ ಮನೆಯಲ್ಲಿ ಪ್ಯಾನಿಗೆ ಇಬ್ಬರು ನೇಣು ಬಿಗಿದುಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ(22), ಬಾಚಪ್ಪನಟ್ಟಿ ಗ್ರಾಮದ ಯುವಶ್ರೀ(17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ಖಾಸಗಿ ಕಂಪನಿಯಲ್ಲಿ ನರಸಿಂಹಮೂರ್ತಿ ಕೆಲಸ ಮಾಡುತ್ತಿದ್ದ. ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಯುವಶ್ರೀ ವ್ಯಾಸಂಗ ಮಾಡುತ್ತಿದ್ದರು. ಕೆಲ ವರ್ಷಗಳಿಂದ ನರಸಿಂಹ ಮೂರ್ತಿ ಹಾಗೂ ಯುವಶ್ರೀ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿ ವಿಚಾರ ತಿಳಿದು ಯುವತಿ ಪೋಷಕರಿಂದ ತೀವ್ರ ವಿರೋಧ ವ್ಯಕ್ತಪಡಿಸಿದರು.

ಕಳೆದ ತಿಂಗಳು ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ಯುವತಿ ಪೋಷಕರಿಂದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ನರಸಿಂಹಮೂರ್ತಿಯನ್ನ ಪೋಕ್ಸೋ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕಳೆದ ಹತ್ತು‌ ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಜೈಲಿನಿಂದ ನರಸಿಂಹಮೂರ್ತಿ ಹೊರಬಂದಿದ್ದರು.

ಜೈಲಿನಿಂದ ಹೊರಬಂದ ಬಳಿಕ ಯುವತಿ ಜೊತೆ ನಿರಂತರ ಪೋನ್ ಸಂಪರ್ಕ ಇದ್ದರು. ನಿನ್ನೇ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಯುವತಿ ಮನೆಗೆ ಹೋಗಿದ್ದ. ಪ್ರೀತಿಗೆ ಯುವತಿ ಪೋಷಕರು ವಿರೋಧದಿಂದ ಬೇಸತ್ತು ಆತ್ಮಹತ್ಯೆ ನಿರ್ಧಾರ ಮಾಡಿದ್ದಾರೆ.

ಬಾಗಿಲು ಹಾಕಿಕೊಂಡು ಮನೆಯೊಳಗೆ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು, ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share to all

You May Also Like

More From Author