ಡ್ರ್ಯೆವರ್ ನಿರ್ಲಕ್ಷ್ಯ ಸ್ಲೀಪರ್ ಕೋಚ್ ಬಸ್ ಪಲ್ಟಿ. ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಪಾಳಾ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ.
ಬೆಂಗಳೂರು ನಿಂದ ಬೆಳಗಾವಿಯತ್ತ ಹೋಗುತ್ತಿದ್ದ
ಶಿಬರ್ಡ್ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ಸಿನೊಳಗೆ ಇದ್ದ ಪ್ರಯಾಣಿಕರಿಗೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂಳಿದ ಪ್ರಯಾಣಿಕರು ಆಂಬುಲೆನ್ಸಗಾಗಿ ಕಾಯುತ್ತಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉದಯ ವಾರ್ತೆ ಹುಬ್ಬಳ್ಳಿ