ಜೈಲು ಪಾಲಾದ ಮೂರು ತಿಂಗಳಲ್ಲಿ 15 ಕೆಜಿ ತೂಕ ಕಳೆದುಕೊಂಡ ದರ್ಶನ್!

Share to all

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನದಲ್ಲಿರುವ ಆರೋಪಿ ದರ್ಶನ್ ಅವರು ಬೆಂಗಳೂರು ಸೆಂಟ್ರಲ್‌ ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಈ ಮೂರು ತಿಂಗಳಲ್ಲಿ ನಟ ದರ್ಶನ್ 15 ಕೆಜಿ ತೂಕ ಕಳೆದುಕೊಂಡಿದ್ದಾರೆ. ಈಗ ಬಳ್ಳಾರಿ ಜೈಲಿನಲ್ಲಿಯೂ ಕೆಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅನ್ನು ಜೂನ್ 11 ರಂದು ಬಂಧಿಸಲಾಗಿತ್ತು. 14 ದಿನಗಳ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು ಆಗಿನಿಂದಲೂ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ ದರ್ಶನ್. ಜೈಲಿನ ಊಟ, ಏಕಾಂಗಿತನದಿಂದ ದರ್ಶನ್ ದೇಹತೂಕ ಕಳೆದುಕೊಂಡಿದ್ದಾರೆ.

ಜೈಲಿಗೆ ಹೋಗುವ ಮುಂಚೆ ಇದ್ದ ತೂಕಕ್ಕಿಂತಲೂ ಸುಮಾರು 15 ಕೆಜಿ ತೂಕವನ್ನು ನಟ ದರ್ಶನ್ ಕಳೆದುಕೊಂಡಿದ್ದಾರೆ. ಜೈಲಿಗೆ ಹೋಗುವಾಗ ದರ್ಶನ್ ಇದ್ದ ತೂಕಕ್ಕೂ ಮೊಮ್ಮೆ ಬಳ್ಳಾರಿ ಜೈಲಿಗೆ ಬಂದಾಗ ಮತ್ತೆ ತೂಕ ಹಾಕಲಾಗಿದ್ದು, ಎರಡರ ನಡುವೆ ಅಂತರ 15 ಕೆಜಿ ಇದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ಇನ್ನಷ್ಟು ತೂಕ ಕಳೆದುಕೊಳ್ಳುವ ಸಾಧ್ಯತೆ ಇದೆ.

ಇನ್ನು ದರ್ಶನ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ಬಗ್ಗೆ ಜೈಲು ಅಧಿಕಾರಿಗಳ ಬಳಿ ಚಿಕಿತ್ಸೆ ಹಾಗೂ ಕೆಲವು ಸೌಲಭ್ಯಗಳಿಗೆ ಮನವಿ ಮಾಡಿದ್ದಾರೆ. ಬೆನ್ನು ನೋವಿರುವ ಕಾರಣ, ಭಾರತೀಯ ಶೈಲಿಯ ಶೌಚಾಲಯ ಬಳಸಲಾಗದು, ಪಾಶ್ಚಾತ್ಯ ಶೈಲಿಯ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ.


Share to all

You May Also Like

More From Author