ರೇಣುಕಾಸ್ವಾಮಿ ಪ್ರಕರಣ: ಆರೋಪಿಗಳ ವಿರುದ್ಧ ಸಲ್ಲಿಸಿದ 3991 ಪುಟಗಳ ಚಾರ್ಜ್‌ ಶೀಟ್‌́ನ ಒಳಗೇನಿದೆ.?

Share to all

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿಯ ಬರ್ಬರ ಕೊಲೆ ಕೇಸ್​ ನ ತನಿಖೆ ಕೊನೇ ಹಂತಕ್ಕೆ ಬಂದಿದೆ.  ಈಗಾಗಲೇ ಪ್ರಕರಣದ ಆಳ-ಅಗಲ ಬಿಡದೇ ಇಂಚಿಂಚೂ ತನಿಖೆ ನಡೆಸಿರುವ ಪೊಲೀಸರು ಕೊನೆಗೂ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಂದು ಪ್ರಮುಖ ಬೆಳವಣಿಗೆ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಹಾಗಾಗಿಲ್ಲ. ಇದು ದರ್ಶನ್ ಫ್ಯಾನ್ಸ್​ಗೆ ಕೊಂಚ ರಿಲೀಫ್ ನೀಡಿದೆ.

ಈ ಮೊದಲು ಎಫ್​ಐಆರ್​ ಹಾಕುವಾಗ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್​ಶೀಟ್​ನಲ್ಲಿ ಬದಲಿಸಬಹುದು ಎಂದು ಊಹಿಸಲಾಗಿತ್ತು. ದರ್ಶನ್ ಎ1 ಹಗೂ ಪವಿತ್ರಾ ಎ2 ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಎಸಿಪಿ ಚಂದನ್​​ ಕುಮಾರ್ ಹಾಗೂ ತನಿಖಾ ತಂಡ ದರ್ಶನ್ ಅವರನ್ನು ಎರಡನೇ ಆರೋಪಿ ಆಗಿ ಉಲ್ಲೇಖ ಮಾಡಿದೆ.

17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. 3 ಪ್ರತ್ಯಕ್ಷ ಸಾಕ್ಷಿಗಳು ಇವೆ. ಎಫ್​ಎಸ್​ಎಲ್​ ಮಾತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳು ಇವೆ. ಈ ಪ್ರಕರಣದಲ್ಲಿ ಒಟ್ಟೂ 231 ಸಾಕ್ಷಿಗಳು ಇವೆ. ಕೊಲೆ ಕೇಸ್​ನಲ್ಲಿ ಇನ್ನೂ ತನಿಖೆ ಪೂರ್ಣಗೊಂಡಿಲ್ಲ. ಹೀಗಾಗಿ, ಹೀಗಾಗಿ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ವ್ಯಕ್ತಿಗಳನ್ನು ಬಂಧನ ಮಾಡಲಾಗಿದೆ. ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ತನಿಖಾಧಿಕಾರಿಗಳು ಇಲ್ಲಿಯವರೆಗಿನ ತನಿಖೆಯಲ್ಲಿನ ಸಂಗ್ರಹಿಸಿರುವ ಪ್ರತ್ಯಕ್ಷ, ಸಾಧರ್ಭಿಕ, ತಾಂತ್ರಿಕ, ವೈಜ್ಞಾನಿಕ ಹಾಗೂ ಇತರೆ ಸಾಕ್ಷ್ಯಾಧಾರಗಳಿಂದ 17 ಆರೋಪಿತರ ವಿರುದ್ಧ ಮಾನ್ಯ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಲಾಗುತ್ತಿದೆ.

ಈ ಪಟ್ಟಿಯಲ್ಲಿ ಒಟ್ಟು 231 ಸಾಕ್ಷಿದಾರರನ್ನು ಒಳಗೊಂಡಂತೆ ಒಟ್ಟು 3991 ಪುಟಗಳುಳ್ಳ 07 ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ. ಈ ಪ್ರಕರಣದ ತನಿಖೆಯನ್ನು ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ, ಪಶ್ಚಿಮ ವಲಯದ ಅಪರ ಪೊಲೀಸ್ ಆಯುಕ್ತ ಸತೀಶ್‌ ಕುಮಾರ್ ಎನ್ ಮಾರ್ಗದರ್ಶನದಲ್ಲಿ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಗಿರೀಶ್.ಎಸ್ ನೇತೃತ್ವದಲ್ಲಿ, ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಚಂದನ್‌ಕುಮಾರ್.ಎನ್

ಹಾಗೂ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದೆ. ಜೊತೆಗೆ ಪ್ರಕರಣವನ್ನು ಭೇದಿಸುವಲ್ಲಿ ಮತ್ತು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಇನ್ನು ಹೆಚ್ಚಿನ ತನಿಖೆಯನ್ನು ಕೈಗೊಂಡು ಸಂಗ್ರಹವಾಗುವ ಸಾಕ್ಷಾಧಾರಗಳನ್ನು ಕಲಂ- 173(8) ಸಿಆರ್‌ಪಿಸಿ ಅಡಿಯಲ್ಲಿ ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು.

 


Share to all

You May Also Like

More From Author