ದಶಕಗಳ ಕನಸು ಈಡೇರಿದ ಸಮಯ: CM ಸಿದ್ದರಾಮಯ್ಯರಿಂದ ಮೊದಲ ಹಂತದ ಯೋಜನೆಗೆ ಚಾಲನೆ

Share to all

ಹಾಸನ: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಂಡಿದೆ. ಹೌದು ಬಯಲುಸೀಮೆ ಜಿಲ್ಲೆಗಳ ಜನರ ದಶಕಗಳ ಕನಸು ಈಡೇರುವ ಸಮಯ ಬಂದಿದ್ದು, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ ಒಂದು ಇಂದು ಉದ್ಘಾಟನೆಯಾಗಿದೆ. ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡನಾಗರ ಗ್ರಾಮದಲ್ಲಿ ಪಂಪ್ ಹೌಸ್ ದ್ವಾರದಲ್ಲಿ ಟೇಪ್ ಕತ್ತರಿಸಿ ಸಿಎಂ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಹಾಗೂ ಕೆ.ಎನ್ ರಾಜಣ್ಣ ಸೇರಿದಂತೆ ಹಲವು ಶಾಸಕರು ಸಾಥ್ ನೀಡಿದ್ದಾರೆ.

ಇಂದು ಬೆಳಗ್ಗೆ 8.30ರಿಂದ ಉದ್ಘಾಟನಾ ಸ್ಥಳದಲ್ಲಿ ಹೋಮ ಹವನ ನೆರವೇರಿತು. ಕಾರ್ಯಕ್ರಮದ ಉಸ್ತುವಾರಿಯನ್ನು ಜಲಸಂಪನ್ಮೂಲ ಇಲಾಖೆ ಸಚಿವ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೊಂದಿದ್ದಾರೆ. 7 ವಿಯರ್​​ಗಳ ಮೂಲಕ ಪಂಪ್‌ ಮಾಡಿದ್ದ ನೀರಿಗೆ ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ 4ರಲ್ಲಿ ಬಾಗಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಬಾಗಿನ ಅಪರ್ಪಿಸಲಿದ್ದಾರೆ. ಬಾಗಿನ ಅರ್ಪಣೆ ಸಮೀಪವೇ ಬೃಹತ್ ಬಹಿರಂಗ ಸಮಾವೇಶ ಆಯೋಜನೆ ಮಾಡಲಾಗಿದೆ.

 


Share to all

You May Also Like

More From Author