ಬೆಂಗಳೂರು: ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ನ್ಯಾಯಾಂಗ ಬಂಧನದ ಅವದಿ ಇಂದಿಗೆ ಪೂರ್ಣಗೊಳ್ಳಲಿದೆ. ಕೋರ್ಟ್ನಲ್ಲಿ ಇದರ ವಿಚಾರಣೆ ಇಂದು ನಡೆಯಲಿದೆ. ಕೆಲವರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ದರ್ಶನ್ ಇನ್ನೂ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿಲ್ಲ. ಹೀಗಾಗಿ, ಎಲ್ಲರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ..
ಆದರೆ ಇದರಲ್ಲಿನ ಗೌಪ್ಯ ಮಾಹಿತಿಗಳು ಬಹಿರಂಗ ಪಡಿಸಬಾರದು ಎಂದು ದರ್ಶನ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಾರ್ಜ್ಶೀಟ್ನಲ್ಲಿ ಮಾಹಿತಿಗಳನ್ನು ಸೋರಿಕೆ ಮಾಡದಂತೆ ನಿರ್ಬಂಧ ಕೋರಿ ದರ್ಶನ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಚಾರ್ಜ್ಶೀಟ್ನಲ್ಲಿ ದರ್ಶನ್ ಅವರು ಏನು ಮಾಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ರೇಣುಕಾ ಸ್ವಾಮಿಗೆ ಕೊಟ್ಟ ಚಿತ್ರ ಹಿಂಸೆಗಳ ಬಗ್ಗೆ ಅಲ್ಲಿ ವಿವರಣೆ ನೀಡಲಾಗಿತ್ತು. ಇವುಗಳ ಪ್ರಸಾರದ ಮೇಲೆ ನಿರ್ಬಂಧ ಹೇರಿ ಎಂದು ದರ್ಶನ್ ಕೋರಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸುಮಾರು ಮೂರು ತಿಂಗಳ ಬಳಿಕ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 3991 ಪುಟಗಳ ಆರೋಪ ಪಟ್ಟಿಯಲ್ಲಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ರಾಕ್ಷಸ ಕೃತ್ಯ ಬಯಲಾಗಿದೆ. ಇತ್ತ ರೇಣುಕಾಸ್ವಾಮಿ ಕುಟುಂಬಸ್ಥರು ಕಣ್ಣೀರು ಹಾಕ್ತಿದ್ರೆ ಅತ್ತ ಡಿ ಗ್ಯಾಂಗ್ ಜೈಲಿನಿಂದ ಹೊರ ಬರಲು ಸಿದ್ಧತೆಯಲ್ಲಿ ತೊಡಗಿದೆ.