ದರ್ಶನ್ ವಿರುದ್ಧದ ಚಾರ್ಜ್ ಶೀಟ್ʼಗೆ ಟ್ವಿಸ್ಟ್: ಆರೋಪ ಪಟ್ಟಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ!

Share to all

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪಿಗಳ ಪರ ವಕೀಲರ ಅವಗಾಹನೆಗೆ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಾದ ಹಲವು ಆಘಾತಕಾರಿ ವಿಷಯಗಳನ್ನು ಆರೋಪ ಪಟ್ಟಿ ಒಳಗೊಂಡಿದೆ. ಆರೋಪಿಗಳು ಪೊಲೀಸರ ಮುಂದೆ ದಾಖಲಿಸಿರುವ ಸ್ವ ಇಚ್ಛಾ ಹೇಳಿಕೆಯನ್ನು ಸಹ ಆರೋಪ ಪಟ್ಟಿ ಒಳಗೊಂಡಿದೆ.

ಇದರ ಬೆನ್ನಲ್ಲೇ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರೋಪ ಪಟ್ಟಿಯಲ್ಲಿನ ಮಾಹಿತಿಗಳು ಸತತವಾಗಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದೆ. ಆದರೆ ಆರೋಪ ಪಟ್ಟಿಯಲ್ಲಿನ ಮಾಹಿತಿಯನ್ನು ಪ್ರಸಾರ ಮಾಡದಂತೆ ಹೈಕೋರ್ಟ್ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಆರೋಪ ಪಟ್ಟಿಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಪ್ರಿಂಟ್ ಮಾಡದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಅಸಲಿಗೆ ಆಗಸ್ಟ್ 27 ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.

ಈಗ ಅದೇ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ಪೀಠವು ಮುಂದಿನ ವಿಚಾರಣೆ ವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ.

ವಿಚಾರಣೆ ನಡೆಸಿದ ಹೈಕೋರ್ಟ್ ಪೀಠವು ಸುಪ್ರೀಂಕೋರ್ಟ್​ನ ಸಿದ್ಧಾರ್ಥ ವಶಿಷ್ಟ್ @ ಮನು ಶರ್ಮಾ ವಿರುದ್ಧ ರಾಜ್ಯ (ದೆಹಲಿಯ ಎನ್‌ಸಿಟಿ), 2010, ಮತ್ತು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ರೆಗ್ಯುಲೇಶನ್ ಆಕ್ಟ್, 1995 ರ ಷರತ್ತು 5 ಮತ್ತು ಸಮನ್ವಯ ಪೀಠದ ತೀರ್ಪನ್ನು ಉಲ್ಲೇಖ ಮಾಡಿ, ಮೇಲಿನಂತೆ ಆದೇಶ ನೀಡಿದೆ. ನ್ಯಾಯಾಲಯದ ಆದೇಶವನ್ನು ಮಾಧ್ಯಮಗಳಿಗೆ ತಲುಪಿಸುವಂತೆ ಹಾಗೂ ಆದೇಶ ಪಾಲನೆ ಆಗವಂತೆ ನಿಗಾ ವಹಿಸುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ನಿರ್ದೇಶನ ನೀಡಿದೆ.


Share to all

You May Also Like

More From Author