ಕರ್ನಾಟಕದಲ್ಲಿರುವುದು ತಾಲಿಬಾನ್ ಸರ್ಕಾರ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ!

Share to all

ಬೆಂಗಳೂರು:- ಕರ್ನಾಟಕದಲ್ಲಿರುವುದು ತಾಲಿಬಾನ್ ಸರ್ಕಾರ ಎಂದು ಕಾಂಗ್ರೆಸ್ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದರು. ಈ ಸಂಬಂಧ x ಮಾಡಿರುವ ಅವರು,ಕಾಂಗ್ರೆಸ್ ಸರ್ಕಾರವು ತಾಲಿಬಾನ್ ಸರ್ಕಾರ ಆಗಿದೆ. ಅಷ್ಟೇ ಅಲ್ಲ ಘಟನೆ ಸಂಬಂಧ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿ ಉತ್ತರಕ್ಕೆ ಆಗ್ರಹಿಸಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ. ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆಸಲಾಗಿದೆ.

ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವಂತೆ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡಿ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ. ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share to all

You May Also Like

More From Author