ಇಂದಿನಿಂದ ಭಾರತ vs ಬಾಂಗ್ಲಾದೇಶ್ ನಡುವಣ ಸರಣಿ ಶುರುವಾಗಲಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಉಭಯ ತಂಡಗಳಿಗೆ ಈ ಸರಣಿಯು ತುಂಬಾ ಮಹತ್ವದ್ದು. ಅದರಲ್ಲೂ ಭಾರತ ತಂಡವು ಈ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ಆಡುವುದು ಬಹುತೇಕ ಖಚಿತವಾಗಲಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಭರ್ಜರಿ ಜಯ ಸಾಧಿಸುವ ಇರಾದೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಲಿದೆ
ಮತ್ತೊಂದೆಡೆ ಪಾಕಿಸ್ತಾನ್ ತಂಡದ ವಿರುದ್ಧದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿರುವ ಬಾಂಗ್ಲಾದೇಶ್ ತಂಡವು ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ರೇಸ್ನಲ್ಲಿದೆ. ಹೀಗಾಗಿ ಭಾರತದ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ಡಬ್ಲ್ಯೂಟಿಸಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ವಿಶ್ವಾಸದಲ್ಲಿದೆ.