ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು. ದುಡ್ಡಿನ ಆಸೆಗಾಗಿ ಕೊಲೆ ಮಾಡಿರುವುದಾಗಿ ಕೇಶವಮೂರ್ತಿ ಒಪ್ಪಿಕೊಂಡಿದ್ದವರಲ್ಲಿ ಒಬ್ಬ. ಸಾಕ್ಷಿನಾಶ ಪಡಿಸದಂತೆ ಎಚ್ಚರಿಕೆ ಸಹ ನೀಡಲಾಗಿದೆ ಎನ್ನಲಾಗ್ತಿದೆ. ಸಾಕ್ಷಿ ನಾಶ ಕೇಶಲ್ಲಿ ಬಂಧನವಾಗಿದ್ದ ಕೇಶವಮೂರ್ತಿ. ಒಬ್ಬ ಶ್ಯೂರಿಟಿ ಹಾಗೂ ಸಾಕ್ಷಿ ನಾಶಪಡಿಸದಂತೆ ಹೈಕೋರ್ಟ್ ಸೂಚನೆ ನೀಡಿದೆ.
ಇನ್ನೂ ದರ್ಶನ್ ಅವರು ಬೇಲ್ ಸಲುವಾಗಿ ಅರ್ಜಿ ಸಲ್ಲಿಸಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 27ಕ್ಕೆ ಮುಂದೂಡಲಾಗಿದೆ. ಸದ್ಯ ಅವರು ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಎ1 ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಿಕೆ ಆಗಿದೆ.