BREAKING: ಸಿಎಂ ವಿರುದ್ಧ FIR ದಾಖಲಿಸುವಂತೆ ಕೋರ್ಟ್‌ ಆದೇಶ! ಅಲ್ಲಾಡುತ್ತಿದೆ CM ಕುರ್ಚಿ!?

Share to all

ಬೆಂಗಳೂರು:- ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಕೋರಿದ್ದ ಅರ್ಜಿ ಜನಪ್ರತಿನಿಧಿ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ತೀರ್ಪು ಪ್ರಕಟವಾಗಿದೆ. ಇದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್​ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

 

 


Share to all

You May Also Like

More From Author