ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು: ಯಾವ್ಯಾವ ಸೆಕ್ಷನ್ ಹಾಕಲಾಗಿದೆ ಗೊತ್ತಾ..?

Share to all

ಮುಡಾ ಹಗರಣ ವಿಚಾರವಾಗಿ ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು.

ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಎ1 ಆರೋಪಿ ಆಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಸಿದ್ದರಾಮಯ್ಯ ಅವರ ಭಾಮೈದ ಎ3 ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು ಎ4  ಮಾಡಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಇನ್ನು ಎಫ್‌ಐಆರ್‌ ಅನ್ನು ಕೋರ್ಟ್ ನಿರ್ದೇಶನ ನೀಡಿದ್ದ ಸೆಕ್ಷನ್‌ಗಳ ಅಡಿಯಲ್ಲಿಯೇ ದಾಖಲು ಮಾಡಲಾಗಿದೆ.

ಯಾವೆಲ್ಲಾ ಸೆಕ್ಷನ್ ದಾಖಲು?

ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಎಫ್​ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.

 ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು


Share to all

You May Also Like

More From Author