ಬೆಂಗಳೂರು: ರಾಜ್ಯಪಾಲರ ವಿಚಾರದಲ್ಲಿ ಸಿದ್ದರಾಮಯ್ಯ ಉಪದೇಶ ಮಾಡಿದ್ದಾರೆ, ಉತ್ತರ ಕೊಡಲಿ ಎಂದು ವಿಡಿಯೋ ಸಮೇತ ಹೆಚ್‌ಡಿಕೆ ಸವಾಲ್ ಹಾಕಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಂದ್ರಶೇಖರ ಎಷ್ಟು ಉದ್ಧಟ ಇರಬಹುದು? ರಾಜ್ಯಪಾಲರ ಕಚೇರಿ ಪರಿಶೀಲನೆ ಮಾಡುತ್ತೇವೆ ಎಂದರೆ ಏನು? ಇದಕ್ಕೆ ಸಿಎಂ ಆದೇಶ ಕೊಟ್ಟರೋ, ಸಚಿವರು ಕೊಟ್ಟರೋ ಎಂದು ಪ್ರಶ್ನಿಸಿದರು.
ಅದಲ್ಲದೆ ನನ್ನ ಬಳಿ ಇರುವ ದಾಖಲೆಗಳನ್ನು ಏನಾದರೂ ಬಿಡುಗಡೆ ಮಾಡಿದರೆ ಐದರಿಂದ ಆರು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಜೊತೆಗೆ ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಶಾಪ ಹಾಕಿದ್ದಾರೆ.
ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್‌ಡಿಕೆ ಆಕ್ರೋಶ ವ್ಯಕ್ತಪಡಿಸಿದರು.