ಇಂಗ್ಲೆಂಡ್ ಆಟಗಾರನ ಅಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಪುಡಿಪುಡಿ!

Share to all

ಬ್ರೂಕ್ ಸಿಡಿಲಬ್ಬರಕ್ಕೆ ಭಾರತೀಯ ಆಟಗಾರ ಕೊಹ್ಲಿ ದಾಖಲೆ ಧೂಳೀಪಟವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕನೆಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2019 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಕಿಂಗ್ ಕೊಹ್ಲಿ 310 ರನ್ ಬಾರಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ ಕ್ಯಾಪ್ಟನ್ ಕೊಹ್ಲಿಯ ಹೆಸರಿನ್ಲಲಿದ್ದ ಈ ದಾಖಲೆಯನ್ನು ಬ್ರೂಕ್ ಮುರಿದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಿದ್ದ ಹ್ಯಾರಿ ಬ್ರೂಕ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಐದು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಬ್ರೂಕ್ ಒಂದು ಶತಕ ಹಾಗೂ ಎರಡು ಅರ್ಧಶತಕಗೊಂದಿಗೆ ಒಟ್ಟು 312 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಸರಣಿಯವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


Share to all

You May Also Like

More From Author