ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

Share to all

ಬೆಂಗಳೂರು:– ಸಿಎಂ ಸಿದ್ದರಾಮಯ್ಯ ಅವರು, ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದು, ಅಕ್ಟೋಬರ್​ 23, 24 ಮತ್ತು 25ರಂದು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ “ಕಿತ್ತೂರು ವಿಜಯ ಉತ್ಸವ” ನಡೆಯಲಿದೆ ಎಂದಿದ್ದಾರೆ.

1824ರಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರೊಂದಿಗೆ ಹೋರಾಡಿ ವಿಜಯಶಾಲಿಯಾದರು. ಈ ಯದ್ಧ ನಡೆದು 200 ವರ್ಷಗಳಾಗಿವೆ. ಹೀಗಾಗಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದೇವೆ. ಕಿತ್ತೂರು ವಿಜಯ ಜ್ಯೋತಿ ಯಾತ್ರೆ ಇಂದಿನಿಂದ ಎಲ್ಲ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಕಿತ್ತೂರು ತಲುಪಲಿದೆ. ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುತ್ತಿದ್ದೇವೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮನವರು ನಮಗೆಲ್ಲ ಸ್ವಾಭಿಮಾನದ ಸಂಕೇತ. ಬ್ರಿಟಿಷರು ಜಾರಿಗೆ ತಂದಿದ್ದ ತೆರಿಗೆ ನೀತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಕಿತ್ತೂರು ರಾಣಿ ಚೆನ್ನಮ್ಮ ಅವರು ವಿರೋಧ ಮಾಡಿದ್ದರು. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರಿಗೆ ತೆರಿಗೆ ಕೊಡಲ್ಲ ಅಂತ ನೇರವಾಗಿ ಹೇಳಿದರು. ಸಂಗೊಳ್ಳಿ ರಾಯಣ್ಣ ಸಹ ಇವರ ಸೈನ್ಯದಲ್ಲೇ ಇದ್ದರು. ಮೊದಲನೇ ಯುದ್ಧದಲ್ಲಿ‌ ಚೆನ್ನಮ್ಮ ಅವರಿಗೆ ಜಯವಾಗುತ್ತದೆ. ಎರಡನೇ ಯುದ್ಧಕ್ಕೆ ಬ್ರಿಟಿಷರು ಹೆಚ್ಚು ಸೈನ್ಯ ತೆಗೆದುಕೊಂಡು ಬಂದಿದ್ದರಿಂದ ಕಿತ್ತೂರಿಗೆ ಸೋಲಾಗುತ್ತದೆ. ಬ್ರಿಟಿಷರು ಕಿತ್ತೂರನ್ನು ಆಕ್ರಮಿಸಿಕೊಳ್ಳುತ್ತಾರೆ. ಚೆನ್ನಮ್ಮ ಅವರನ್ನು ಸೆರೆ ಹಿಡಿಯುತ್ತಾರೆ ಎಂದು ತಿಳಿಸಿದರು

ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರನ್ನು ನೋಡಿ ದೇಶ, ನಾಡಿನ ಪ್ರೇಮ ಮತ್ತು ಸ್ವಾಭಿಮಾನವನ್ನು ಕಲಿಯಬೇಕು. ದೇಶದ ಎಲ್ಲ ರಾಣಿಯರಗಿಂತ ಕಿತ್ತೂರು ರಾಣಿ ಚೆನ್ನಮ್ಮ ಮುಂಚೂಣಿಯಲ್ಲಿರುತ್ತಾರೆ.

ಬೆಳಗಾವಿಯಲ್ಲಿ 1924ರ ಡಿಸೆಂಬರ್​ 24ರಂದು ಕಾಂಗ್ರೆಸ್ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಗ್ರಹದಿಂದ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.


Share to all

You May Also Like

More From Author