ಗಿಚ್ಚಿ ಗಿಲಿಗಿಲಿ ಖ್ಯಾತಿಯ ಹುಲಿ ಕಾರ್ತಿಕ್ ವಿರುದ್ಧ FIR ದಾಖಲು! ಬೋವಿ ಜನಾಂಗಕ್ಕೆ ಅವಮಾನ ಮಾಡಿದ್ರಾ ಈ ನಟ..!?

Share to all

ಬೆಂಗಳೂರು: ಕಿರುತೆರೆಯ ಪ್ರೇಕ್ಷಕರ ಅಚ್ಚು ಮೆಚ್ಚಿನ ಕಾಮಿಡಿ ಶೋ ‘ಗಿಚ್ಚಿ ಗಿಲಿಗಿಲಿ 3’ ಕಾರ್ಯಕ್ರಮದ ವಿನ್ನರ್ ಆಗಿ ನಟ ಹುಲಿ ಕಾರ್ತಿಕ್ ವಿನ್ನರ್ ಆಗಿ ಹೊರಹೊಮ್ಮಿದ್ದರು. ಆದ್ರೇ ಈಗ ಈ ನಟನ ವಿರುದ್ಧ ಜಾತಿ ನಿಂದನೆ ಮಾಡಿದ್ದಾನೆಂದು ಎಫ್ ಐ ಆರ್ ದಾಖಲಾಗಿದೆ. ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ. ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ,

ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ. ಜಾತಿ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿ A-1 ಹುಲಿ ಕಾರ್ತಿಕ್, A-2 ಅನುಬಂಧ ಸ್ಕ್ರಿಪ್ಟ್  ರೈಟರ್, A-3 ಅನುಬಂಧ ಡೈರೆಕ್ಟರ್, A-4 ನಿರ್ಮಾಪಕನ ವಿರುದ್ದ ದೂರು ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಬಿಗ್ ಬಾಸ್ 10’ರ ನಂತರ `ಗಿಚ್ಚಿ ಗಿಲಿಗಿಲಿ’ ಆರಂಭವಾಗಿ ಬರೋಬ್ಬರಿ 8 ತಿಂಗಳ ಕಾಲ ಈ ಶೋ ಸುದೀರ್ಘವಾಗಿ ಮೂಡಿ ಬಂದಿತ್ತು. ಮಲೆನಾಡಿನ ಕಲಾವಿದ ಹುಲಿ ಕಾರ್ತಿಕ್ ಪ್ರಶಸ್ತಿ ಗೆಲ್ಲಲು 8 ವರ್ಷ ಕಾದಿದ್ದಾರೆ. ಮಜಾಭಾರತದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕಾರ್ತಿಕ್, ಅಲ್ಲಿಂದ 8 ವರ್ಷದ ಬಳಿಕ ವಾಹಿನಿಯ ಕಾಮಿಡಿ ನಟನಾಗಿ ಪ್ರಶಸ್ತಿ ಗೆದ್ದುಕೊಂಡಿದ್ದರು.

 


Share to all

You May Also Like

More From Author