ಮಾಜಿ ಸಚಿವ ಜನಾರ್ದನ ರೆಡ್ಡಿ ರೇಂಜ್ ರೋವರ್ ಕಾರು ಪೊಲೀಸ್‌ ವಶಕ್ಕೆ!

Share to all

ಕೊಪ್ಪಳ:- ಶಾಸಕ ಜನಾರ್ದನ ರೆಡ್ಡಿ ಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಕಾನ್ವೆ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿದ ಪೊಲೀಸರು ಗಂಗಾವತಿಗೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದರು. ಈ ಹಿನ್ನಲೇ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ದೂರು ನೀಡಿದ್ದರು.

ಇದೇ ಅ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ರಾಯಚೂರಿನಿಂದ ಜಿಂದಾಲ್ ಏರ್​ಪೋರ್ಟ್​ಗೆ ತೆರಳುತ್ತಿದ್ದರು. ಈ ವೇಳೆ ರೆಡ್ಡಿ ಕಾರು ಚಾಲಕ ಸಿಎಂ ಕಾನ್ವೆಗೆ ಎದುರಾಗಿ ಚಾಲನೆ ಮಾಡಿದ್ದ. ರೂಲ್ಸ್ ಬ್ರೇಕ್ ಹಿನ್ನೆಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬಳಸುವ ರೇಂಜ್ ರೋವರ್, ಸ್ಕಾರ್ಪಿಯೊ ಹಾಗೂ ಫಾರ್ಚೂನರ್ ಸೇರಿ ಮೂರು ಕಾರಗಳ ಮೇಲೆ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಅದರಂತೆ ಇಂದು ಬೆಂಗಳೂರಿನಲ್ಲಿ ಸೀಜ್​ ಮಾಡಲಾಗಿದೆ.

ಅಂದು ಸಿಎಂ ಸಂಚಾರ ಹಿನ್ನಲೆ ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ನಿಮಿಷಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈ ವೇಳೆ ಗಂಗಾವತಿ ನಗರದ ಸಿಬಿಎಸ್ ಸರ್ಕಲ್​ನಲ್ಲಿ ಶಾಸಕ ಜನಾರ್ದನ ರೆಡ್ಡಿ ಕೂಡ ಸಿಲುಕ್ಕಿದ್ದರು. ಬಹಳ ಸಮಯವಾದರೂ ವಾಹನ ಸಂಚಾರಕ್ಕೆ ಅವಕಾಶ ನೀಡದ ಹಿನ್ನಲೆ ರೋಡ್​ನ ಡಿವೈಡರ್ ಮೂಲಕ ಜನಾರ್ದನ್​ ರೆಡ್ಡಿ ಕಾರು ಚಾಲಕ, ಕಾನ್ವೇ ವಿರುದ್ದ ದಿಕ್ಕಿನಲ್ಲಿ ಕಾರು ಚಲಾಯಿಸಿಕೊಂಡು ಹೋಗಿದ್ದರು ಎನ್ನಲಾಗಿದೆ.


Share to all

You May Also Like

More From Author